Home ಟಾಪ್ ಸುದ್ದಿಗಳು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ: ಕರಾವಳಿ‌ ಸೇರಿ ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ: ಕರಾವಳಿ‌ ಸೇರಿ ರಾಜ್ಯದಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು, ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಹಾಗೂ ಬೆಂಗಳೂರಿಗೆ ಮಳೆಯ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ರಾಯಚೂರು, ದಾವಣಗೆರೆ, ಚಾಮರಾಜನಗರ, ರಾಮನಗರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ತುಮಕೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಕೊಂಚ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿಗೆ ಇಂದಿನಿಂದ ಎರಡು ದಿನಗಳ ಮಳೆಯ ಅಲರ್ಟ್ ನೀಡಲಾಗಿದ್ದು, ಬೀದರ್, ಕಲಬುರುಗಿ, ಯಾದಗಿರಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

Join Whatsapp
Exit mobile version