ಮಂಗಳೂರು: ‘ಮಹಿಳಾ ಸುರಕ್ಷತೆಗಾಗಿ ಒಂದು ದಿನ’ ಕಾರ್ಯಕ್ರಮಕ್ಕೆ ಚಾಲನೆ

Prasthutha|

ಮಂಗಳೂರು: ಮಂಗಳೂರು ನಗರ ಪೊಲೀಸ್ ಅಧಿಕಾರಿಗಳಿಂದ ‘ತುರ್ತು ಸ್ಪಂದನ ಬೆಂಬಲ ವ್ಯವಸ್ಥೆ’ ( ಇ ಆರ್ ಎಸ್ ಎಸ್ ) ನ 112 ಸಹಾಯವಾಣಿ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಇಂದು ದಿನವಿಡೀ ಆಯೋಜಿಸಲಾಗಿರುವ ‘ ಮಹಿಳಾ ಸುರಕ್ಷತೆಗಾಗಿ ಒಂದು ದಿನ ‘ ಕಾರ್ಯಕ್ರಮಕ್ಕೆ ಅರ್ಜುನ ಪ್ರಶಸ್ತಿ ಪುರಸ್ಮತೆ ಎಂ.ಆರ್. ಪೂವಮ್ಮ ಚಾಲನೆ ನೀಡಿದರು.


ಬಳಿಕ ಮಾತನಾಡಿದ ಅವರು ಮಂಗಳೂರು ನಗರ ಪೊಲೀಸರು ಆಯೋಜಿಸಿರುವ ಕಾರ್ಯಕ್ರಮ ಮಹಿಳೆಯರಲ್ಲಿ ಧೈರ್ಯ ತುಂಬುವ ಪ್ರಕ್ರಿಯೆಯಾಗಿದೆ ಎಂದು ಹೇಳಿದರು.

- Advertisement -


ಇದೇ ವೇಳೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿ ಯಾವುದೇ ತುರ್ತು ಸಂದರ್ಭದಲ್ಲಿ ಮಹಿಳೆಯರಾಗಲಿ ಅಥವಾ ಇತರ ಯಾರೇ ಆಗಲಿ 112 ಗೆ ಕರೆ ಮಾಡಿದಾಗ ನಗರ ವ್ಯಾಪ್ತಿಯಲ್ಲಿ ಸ್ಥಳೀಯ ಠಾಣೆಯ ಪೊಲೀಸರು 5 ರಿಂದ 10 ನಿಮಿಷಗಳಲ್ಲಿ ಹಾಗೂ ಹೊರವಲಯದಲ್ಲಾದರೆ 15 ನಿಮಿಷಗಳೊಳಗೆ ಘಟನಾ ಸ್ಥಳಕ್ಕೆ ಆಗಮಿಸಿ ಸಮಸ್ಯೆ ನಿವಾರಿಸಲಿದ್ದಾರೆ ಎಂದರು.

- Advertisement -