ಮಂಗಳೂರು SDPI ಕಾರ್ಯಕರ್ತನ ಕೊಲೆ ಯತ್ನ : ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹ

Prasthutha|

ಉಳ್ಳಾಲ : ಕೋಟೆಕಾರ್ ಗ್ರಾಮದ ಹಿದಾಯತ್ ನಗರದಲ್ಲಿ SDPI ಕಾರ್ಯಕರ್ತ ಇಕ್ಬಾಲ್ ಎಂಬುವವರ ಮೇಲೆ ದುಷ್ಕರ್ಮಿಗಳ ಗುಂಪೊಂದು ತಲವಾರು ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸಂಜೆ 7 ಗಂಟೆಯ ಹೊತ್ತಿಗೆ ನಡೆದಿದೆ.

- Advertisement -

ಇಕ್ಬಾಲ್ ಮುಳ್ಳುಗುಡ್ಡೆ ಪ್ರದೇಶದಲ್ಲಿ ಬಡವರೊಬ್ಬರಿಗೆ ಪಕ್ಷದ ವತಿಯಿಂದ ನಿರ್ಮಿಸಿಕೊಡುತ್ತಿರುವ ಮನೆಯ ಕಾಮಗಾರಿಯಲ್ಲಿ ಶ್ರಮದಾನ ಮಾಡಲು ತನ್ನ ಸ್ಕೂಟರ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಹಿದಾಯತ್ ನಗರದಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದೆ.

ಘಟನೆಯಲ್ಲಿ ಇಕ್ಬಾಲ್ ಅವರ ಎರಡೂ ಕೈ, ಕಾಲು ಹಾಗೂ ಹೊಟ್ಟೆಗೆ ಗಾಯವಾಗಿದ್ದು ಅವರನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಯನ್ನು ಖಂಡಿಸಿರುವ SDPI ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಝಾಹಿದ್ ಮಲಾರ್ ಕೂಡಲೇ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

Join Whatsapp