ಮಂಗಳೂರು: ಸಂಘಪರಿವಾರದಿಂದ ಹಲ್ಲೆಗೊಳಗಾದ ಸಂತ್ರಸ್ತರನ್ನು ಭೇಟಿಯಾದ SDPI ನಿಯೋಗ

Prasthutha|

ಮಂಗಳೂರು : ಪುತ್ತೂರು ಕೊಂಬೆಟ್ಟು ಕಾಲೇಜಿನಲ್ಲಿ ಎಬಿವಿಪಿ ಕಾರ್ಯಕರ್ತರಿಂದ ಹಲ್ಲೆಗೊಳಗಾದ ವಿದ್ಯಾರ್ಥಿಗಳು, ಬೆಳ್ತಂಗಡಿ ಮತ್ತು ಮಾನಾಳದಲ್ಲಿ ಸಂಘಪರಿವಾರದಿಂದ ಮಾರಣಾಂತಿಕ ಹಲ್ಲೆಗೊಳಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗುರುವಾರ ಎಸ್ ಡಿಪಿಐ ನಿಯೋಗ ಭೇಟಿ ಮಾಡಿ, ಆರೋಗ್ಯ ವಿಚಾರಿಸಿತು.

- Advertisement -


ಈ ಸಂದರ್ಭದಲ್ಲಿ ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ, ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಕಾರ್ಯದರ್ಶಿ ಸುಹೈಲ್ ಖಾನ್, ಶಾಕಿರ್ ಅಳಕೆಮಜಲ್ ಮತ್ತಿತರರು ಉಪಸ್ಥಿತರಿದ್ದರು.


ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮುಸ್ಲಿಮ್ ವಿದ್ಯಾರ್ಥಿಗಳು ಮತ್ತು ಯುವಕರನ್ನು ಗುರಿಯಾಗಿಸಿ ದಾಳಿ ನಡೆಯುತ್ತಿದೆ. ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಇವೆಲ್ಲವೂ ವ್ಯವಸ್ಥಿತವಾಗಿ ನಡೆಯುತ್ತಿರುವ ಘಟನೆಗಳಾಗಿದ್ದು, ಪೊಲೀಸರ ನಿರ್ಲಕ್ಷ್ಯ ಮತ್ತು ಮೌನ ದುಷ್ಕರ್ಮಿಗಳಿಗೆ ಮತ್ತಷ್ಟು ಕುಮ್ಮಕ್ಕು ನೀಡಿದಂತಿದೆ ಎಂದು ಆರೋಪಿಸಿದರು.

- Advertisement -


ಸಂಘಪರಿವಾರದ ಅಂಗ ಸಂಸ್ಥೆಗಳಾದ ವಿಎಚ್ ಪಿ, ಬಜರಂಗದಳದ ನಾಯಕರು ಇತ್ತೀಚೆಗೆ ತ್ರಿಶೂಲ ವಿತರಿಸಿ ಕೋಮು ಪ್ರಚೋದನೆ ಮಾಡಿದ್ದರಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ. ಹಲ್ಲೆಯಾದ ಮೂರೂ ಘಟನೆಗಳಲ್ಲಿಯೂ ತ್ರಿಶೂಲ ಬಳಸಲಾಗಿದೆ. ಹಿಂದೂ ಸಂಪ್ರದಾಯದಲ್ಲಿ ಹಿಂದು ದೇವತೆಗಳ ಕೈಯಲ್ಲಿರುವ ಆತ್ಮರಕ್ಷಣೆಯ ಸಂಕೇತವಾದ ತ್ರಿಶೂಲವನ್ನು ಒಂದು ಸಮುದಾಯವನ್ನು ಗುರಿಯಾಗಿಸಿ ಹಲ್ಲೆ ನಡೆಸಲು ಬಳಸುತ್ತಿರುವುದು ಖಂಡನೀಯ. ಇದರ ವಿರುದ್ಧ ಪಕ್ಷ ಹೋರಾಟ ನಡೆಸಲಿದೆ ಎಂದು ಹೇಳಿದರು.ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಮಾತನಾಡಿ, ಪುತ್ತೂರು, ಬೆಳ್ತಂಗಡಿ, ಗಂಜಿಮಠ ಮುಂತಾದ ಕಡೆಗಳಲ್ಲಿ ಮುಸ್ಲಿಮರನ್ನು ಗುರಿಯಾಗಿಸಿ ಹಲ್ಲೆ ನಡೆಸಲಾಗಿದೆ. ಪೊಲೀಸರು ತಕ್ಷಣ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

Join Whatsapp