Home ಕರಾವಳಿ ಮಂಗಳೂರು: ಮಹಿಳೆಯರನ್ನು ಅವಮಾನಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲಿಸಿದ SDPI ಸದಸ್ಯೆ

ಮಂಗಳೂರು: ಮಹಿಳೆಯರನ್ನು ಅವಮಾನಿಸಿದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲಿಸಿದ SDPI ಸದಸ್ಯೆ

ಮಂಗಳೂರು: ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿದ್ದಾರೆ ಎಂದು ಆರೋಪಿಸಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಎಸ್‌‌ಡಿಪಿಐ ಬೆಂಬಲಿತ ಉಳಾಯಿಬೆಟ್ಟು ಪಂಚಾಯತ್ ಸದಸ್ಯೆ ಶೈನಾಝ್ ಉಳಾಯಿಬೆಟ್ಟು ಮಂಗಳೂರು ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.ಕಲ್ಲಡ್ಕ ಪ್ರಭಾಕರ್ ಭಟ್ ಅವರು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ರೀತಿಯಲ್ಲಿಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಜೊತೆಗೆ ಅಸಭ್ಯ ಭಾಷೆಯಲ್ಲಿ ಮಹಿಳೆಯರ ಲೈಂಗಿಕ ಜೀವನ ಮತ್ತು ಕೌಟುಂಬಿಕ ಜೀವನವನ್ನು ಕೀಳಾಗಿ ಬಿಂಬಿಸಿದ್ದಾರೆ. ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಶೈನಾಝ್ ಆಗ್ರಹಿಸಿದ್ದಾರೆ.ಈ ಸಂಧರ್ಭದಲ್ಲಿ WIM ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಶಾ ವಾಮಂಜೂರು, WIM ಕಾರ್ಯಕರ್ತೆಯರಾದ ರಮೀಝ ಮೂಡುಶೆಡ್ಡೆ, ಸುಮಯ್ಯ ಮೂಡುಶೆಡ್ಡೆ ಉಪಸ್ಥಿತರಿದ್ದರು.

Join Whatsapp
Exit mobile version