ಮಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ‘ಒಳ ನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿ ಎಂಬ ಘೋಷಣೆ ಯೊಂದಿಗೆ 1991ರ ಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟವನ್ನು ಹಮ್ಮಿಕೊಂಡಿದೆ. ಅದರ ಭಾಗವಾಗಿ ದಿನಾಂಕ 09.02.2024 ಶುಕ್ರವಾರ ಮಧ್ಯಾಹ್ನ 3.30ಕ್ಕೆ ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ.
ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಇವರ ನೇತ್ರತ್ವದಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು, ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಹಾಗೂ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಪರಂಗಿಪೇಟೆ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಪ್ರದಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.