ಮಂಗಳೂರು: PFI ಹಿರಿಯ ಸದಸ್ಯ, ಸಾಮಾಜಿಕ ಕಾರ್ಯಕರ್ತ ಇಬ್ರಾಹಿಂ ಬೋಳಾರ್ ನಿಧನ

Prasthutha|

ಮಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಹಿರಿಯ ಸದಸ್ಯ, ಸಾಮಾಜಿಕ ಕಾರ್ಯಕರ್ತ, ಲೇಖಕರಾದ ಹಾಜಿ ಇಬ್ರಾಹಿಂ ಬೋಳಾರ್ ಸೋಮವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

- Advertisement -

PFI ಮೂಲಕ ಸಾಮಾಜಿಕ ಹೋರಾಟ ಆರಂಭಿಸಿದ ಅವರು ಹಲವಾರು ಹೋರಾಟಗಳಲ್ಲಿ ಗುರುತಿಸಿಕೊಂಡಿದ್ದರು. ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದ ಇಬ್ರಾಹಿಂ ಬೋಳಾರ ಓರ್ವ ಪುತ್ರಿ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಅವರ ಅಗಲುವಿಕೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತೀವ್ರ ಸಂತಾಪ ವ್ಯಕ್ತಪಡಿಸಿದೆ.



Join Whatsapp