Home ಕರಾವಳಿ ಮಂಗಳೂರು: ರಸ್ತೆಯ ಮೇಲೆ ಹರಿಯುತ್ತಿರುವ ಕೊಳಚೆ ನೀರು

ಮಂಗಳೂರು: ರಸ್ತೆಯ ಮೇಲೆ ಹರಿಯುತ್ತಿರುವ ಕೊಳಚೆ ನೀರು

ಮಂಗಳೂರು: ನಗರದ ಕರಂಗಲ್ಪಾಡಿಯ ಸೈಂಟ್ ಅಲೋಶಿಯಸ್ ಹೈಯರ್ ಪ್ರೈಮರಿ ಸ್ಕೂಲ್ ಮುಖ್ಯ ದ್ವಾರದ ಬಳಿ ಚರಂಡಿ ನೀರು ರಸ್ತೆಯ ಮೇಲೆ ಕಳೆದ ಎರಡು ತಿಂಗಳುಗಳಿಂದ ಹರಿಯುತ್ತಿದ್ದು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಮೂಗು ಮುಚ್ಚಿ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಕರಂಗಲ್ಪಾಡಿಯ ಶಾಲೆಯ ಸಮೀಪವಿರುವ ಹೋಟೆಲ್ ಒಂದರ ಕೊಳಚೆ ನೀರು ರಸ್ತೆಗೆ ಹರಿಯುತ್ತಿದೆ. ಕಳೆದ ಎರಡು ತಿಂಗಳಿಂದ ಬೆಳಗ್ಗಿನ ಹೊತ್ತು ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಆದರೂ ಪಾಲಿಕೆ ಅಧಿಕಾರಿಗಳಾಗಲೀ, ಹೋಟೆಲ್ ಮಾಲೀಕರಾಗಲೀ ಈ ಬಗ್ಗೆ ಗಮನ ಹರಿಸಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ತಕ್ಷಣ ಪಾಲಿಕೆ ಅಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸಿ ಸಾರ್ವಜನಿಕರಿಗೆ ನಡೆದಾಡಲು ಅನುಕೂಲ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

Join Whatsapp
Exit mobile version