- Advertisement -
ಮಂಗಳೂರು: ಮಾಟ, ಮಂತ್ರ ನಿವಾರಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೂಳೂರು ಉಸ್ತಾದ್ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಎಂದು ಗುರುತಿಸಲಾಗಿದ್ದು, ಇವರು ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿ ಚಿಕಿತ್ಸೆಯ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದರು ಎಂದು ತಿಳಿದು ಬಂದಿದೆ.
- Advertisement -
ಅಷ್ಟು ಮಾತ್ರವಲ್ಲದೇ, ಚಿಕಿತ್ಸೆಯ ನೆಪದಲ್ಲಿ ಕೂಳೂರು ಉಸ್ತಾದ್ ಸುಮಾರು 1 ಲಕ್ಷ ರೂಪಾಯಿ ಪಡೆದು ವಂಚಿಸಿದ್ದಾರೆ ಎಂದು ಹೇಳಲಾಗಿದ್ದು, ಹೀಗಾಗಿ ಮಹಿಳೆಯ ಕುಟುಂಬಸ್ಥರು ನೀಡಿದ ದೂರಿನ ಆಧಾರದ ಮೇಲೆ ಕೂಳೂರು ಉಸ್ತಾದ್ ಎಂಬುವವರನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.