Home ಕರಾವಳಿ ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು

ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ರೌಡಿಶೀಟರ್ ಕಾಲಿಗೆ ಗುಂಡೇಟು

ಮಂಗಳೂರು: ನಾನಾ ಅಪರಾಧ ಪ್ರಕರಣಗಳಲ್ಲಿ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಮುಕ್ತಾರ್ ಎಂಬ ರೌಡಿ ಶೀಟರ್ ಗೆ ಉಳ್ಳಾಲ ಪೊಲೀಸರು ಗುಂಡು ಹಾರಿಸಿ ಬೆಳ್ಳಂಬೆಳಗ್ಗೆ
ಬಂಧಿಸಿದ್ದಾರೆ.

ಮಂಗಳೂರು ಹೊರವಲಯದ ಕೊಣಾಜೆ ಠಾಣೆ ವ್ಯಾಪ್ತಿಯ ಅಸೈಗೋಳಿ ಬಳಿ ಘಟನೆ ನಡೆದಿದ್ದು, ಗಾಯಗೊಂಡ ಮುಕ್ತಾರ್ ನನ್ನು ದೇರಳಕಟ್ಟೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮುಕ್ತಾರ್ ಕಾವೂರು ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಆಗಿದ್ದು ಆತನ ವಿರುದ್ಧ 15 ಕ್ಕೂ ಹೆಚ್ಚು ಪ್ರಕರಣಗಳಿವೆ. 2017 ರಿಂದ ಆರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದು ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಪ್ರಕರಣ ಒಂದರಲ್ಲಿ ಆತನನ್ನು ವಶಕ್ಕೆ ಪಡೆದ ಉಳ್ಳಾಲ ಪೊಲೀಸರು ಹಿಂದಿನ ಪ್ರಕರಣಗಳಲ್ಲಿ ವಾಹನಗಳನ್ನು ಬಳಸಿದ ಬಗ್ಗೆ ಮಹಜರು ನಡೆಸಲು ಇಂದು ಬೆಳಗ್ಗೆ ಅಸೈಗೋಳಿಗೆ ಒಯ್ದಿದ್ದರು. ಈ ವೇಳೆ, ಪೊಲೀಸರಿಗೆ ಹಲ್ಲೆಗೈದು ಮುಕ್ತಾರ್ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಉಳ್ಳಾಲ ಪೊಲೀಸ್ ಇನ್ಸ್ ಪೆಕ್ಟರ್ ಸಂದೀಪ್ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ತಿಳಿದಿದ್ದಾರೆ.

Join Whatsapp
Exit mobile version