ಮಂಗಳೂರು: ಸಾಮಾಜಿಕ ಕಾರ್ಯಕರ್ತ, ಯುವ ಉದ್ಯಮಿ ಮುಹಮ್ಮದ್ ತ್ವಾಹಿರ್ ನಿಧನ

Prasthutha: January 13, 2022

ಮಂಗಳೂರು: ಸಾಮಾಜಿಕ ಕಾರ್ಯಕರ್ತ ಹಾಗೂ ಯುವ ಉದ್ಯಮಿ ಮುಹಮ್ಮದ್ ತ್ವಾಹಿರ್ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿದ್ದು, ಪುತ್ರ ಹಾಗೂ ಓರ್ವ ಪುತ್ರಿ, ಪತ್ನಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಉಳ್ಳಾಲದ ಮುಕ್ಕಚ್ಚೇರಿ ನಿವಾಸಿಯಾದ ತ್ವಾಹಿರ್, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ತ್ವಾಹಿರ್ ಅವರು ಹಲವು ಮಸೀದಿ, ಮದ್ರಸಗಳ ನಿರ್ಮಾಣ ಮತ್ತು ಪುನರುಜ್ಜೀವನಕ್ಕೆ ಶ್ರಮಿಸಿದ್ದರು. ಸೌಮ್ಯ ವ್ಯಕ್ತಿತ್ವದ ತ್ವಾಹಿರ್ ಅವರು ಸ್ಥಳೀಯವಾಗಿ ಜನರ ಸಮಸ್ಯೆ ಗಳ ಸ್ಪಂದಿಸುವ ಮೂಲಕ ಸಾಮಾಜಿಕ ಸೇವೆಯಲ್ಲಿ ಚಿರಪರಿಚಿತರಾಗಿದ್ದರು.

ತಾಹಿರ್ ಅವರ ಸಹೋದರ ಫಿರೋಝ್ ಮುಕ್ಕಚ್ಚೇರಿಯ ತೌಹೀದ್ ಮಸೀದಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶ್ರೀಯತರ ತಂದೆ ಇಸ್ಮಾಯಿಲ್ ಫಕೀರ್ ಅವರು ಕೂಡ ಸಾಮಾಜಿಕ ಕ್ಷೇತ್ರದಲ್ಲಿ ಹೆಸರುಗಳಿಸಿದ್ದರು. ಇಂತಹ ಕುಟುಂಬದಲ್ಲಿ ಜನಿಸಿದ್ದ ತಾಹಿರ್ ಅವರು ಕೂಡಾ ತಮ್ಮನ್ನು ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದರು.

ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಮುಕ್ಕಚ್ಚೇರಿಯ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ ಮುಕ್ಕಚ್ಚೇರಿಯ ತೌಹೀದ್ ಮಸೀದಿಯ ಖಬರ ಸ್ಥಾನದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮುಹಮ್ಮ ತಾಹಿರ್ ಅವರ ನಿಧನಕ್ಕೆ ವಿವಿಧ ಸಂಘಟನೆಯ ಮುಖಂಡರು, ಸಾಮಾಜಿಕ, ಧಾರ್ಮಿಕ ನಾಯಕರು ತೀವ್ರ ಸಂತಾಪ ಸೂಚಿಸಿದ್ದಾರೆ

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!