ಮಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸುಮತಿ ಹೆಗ್ಡೆ SDPI ಸೇರ್ಪಡೆ

Prasthutha|

ಮಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹಾಗೂ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಶ್ರೀಮತಿ ಸುಮತಿ ಹೆಗ್ಡೆ ಯವರು SDPI ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಇಂದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

- Advertisement -

ಪಕ್ಷದ ಸಂಸ್ಥಾಪನಾ ದಿನಾಚರಣೆ ಸಂಬಂದಿಸಿದ ನಾಯಕರ ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಪಕ್ಷದ ನಾಯಕರ ಸಮ್ಮುಖದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಝೀನತ್ ಗೂಡಿನಬಳಿ ಯವರು ಪಕ್ಷದ ಶಾಲುಹಾಕಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು.

ಪಕ್ಷಕ್ಕೆ ಸೇರ್ಪಡೆಯಾದ ಸುಮತಿ ಹೆಗ್ಡೆ ಯವರು SDPI ಪಕ್ಷದ ಜನಪರವಾದ ಹಾಗೂ ದೇಶದ ಸಂವಿಧಾನ ಬದ್ದವಾದ ದ್ರಡ ನಿಲುವುಗಳು ಇಂದು ದೇಶದ ರಾಜಕೀಯ ಕ್ಷೇತ್ರಕ್ಕೆ ಅತ್ಯಗತ್ಯ ಹಾಗೂ ಅನಿವಾರ್ಯವಾಗಿದೆ. ಜನಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಇರುವ SDPI ಪಕ್ಷವು ಶೋಷಿತ ಸಮುದಾಯಗಳಿಗೆ ಆಶಾಕಿರಣ ಆಗಿದೆ. ಇದರ ಜಾತ್ಯತೀತ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ನಾನು SDPI ಸೇರ್ಪಡೆಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.

- Advertisement -

ಸುಮತಿ ಹೆಗ್ಡೆಯವರೊಂದಿಗೆ ಮಹಿಳಾ ಜೆಡಿಎಸ್ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಕವಿತಾ, ಜೆಡಿಎಸ್ ಮಂಗಳೂರು ನಗರ ಕಾರ್ಯದರ್ಶಿ ಅಲ್ತಾಫ್ ತುಂಬೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಈ ಸಂದರ್ಭದಲ್ಲಿ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ,ರಾಷ್ಟ್ರೀಯ ಕಾರ್ಯದರ್ಶಿಗಳಾದ ರಿಯಾಝ್ ಫರಂಗಿಪೇಟೆ, ಅಲ್ಫೋನ್ಸ್ ಫ್ರಾಂಕೊ, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ,ರಾಜ್ಯ ಮುಖಂಡರಾದ ಅಥಾವುಲ್ಲ ಜೋಕಟ್ಟೆ, ಅಕ್ಬರ್ ಆಲಿ, ಜಿಲ್ಲಾ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟೀಸ್,ಮಿಸ್ರಿಯಾ ಕಣ್ಣೂರು, ಪ್ರಧಾನ ಕಾರ್ಯದರ್ಶಿ ಗಳಾದ ಅಶ್ರಫ್ ಅಡ್ಡೂರು, ಜಮಾಲ್ ಜೋಕಟ್ಟೆ ಕಾರ್ಯದರ್ಶಿ ಗಳಾದ ಅಕ್ಬರ್ ಬೆಳ್ತಂಗಡಿ ಹಾಗೂ ಸುಹೈಲ್ ಖಾನ್ ಮತ್ತು ಇತರ ಮುಖಂಡರು ಉಪಸ್ಥಿತರಿದ್ದರು.

Join Whatsapp