ಮಂಗಳೂರು| ಬೈಕ್ ಅಪಘಾತ: ವಿದ್ಯಾರ್ಥಿ ಮೃತ್ಯು

Prasthutha|

ಮಂಗಳೂರು: ಬೈಕ್ ಅಪಘಾತದಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಗರದ ಹೊರ ವಲಯದ ಪಡೀಲ್ ಅಂಡರ್ ಪಾಸ್‌ ಬಳಿ ನಡೆದಿದೆ.  

- Advertisement -

ಘಟನೆಯಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿ ಮತ್ತೆ ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ, ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ಓದುತ್ತಿದ್ದ ಭವಿನ್ ರಾಜ್(20) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಡ್ವಿನ್ (19) ಮತ್ತು ಆಶಿತ್ (17) ಎಂಬವರು ಗಾಯಗೊಂಡಿದ್ದು, ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಭವಿನ್‌ ರಾಜ್ ಗುರುವಾರ ಮಧ್ಯಾಹ್ನ ತನ್ನ ಗೆಳೆಯರ ಜತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಪಡೀಲ್ ಅಂಡರ್‌ಪಾಸ್ ಬಳಿ ಬೈಕ್ ನಿಯಂತ್ರಣ ತಪ್ಪಿ ಅಂಡರ್‌ಪಾಸ್ ಫುಟ್‌ಪಾತ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದ ಮೂವರು ಕೂಡ ಗಾಯಗೊಂಡಿದ್ದು, ಈ ಪೈಕಿ ಭವಿನ್‌ ರಾಜ್ ಮೃತಪಟ್ಟಿದ್ದಾರೆ.

 ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Join Whatsapp