ಮಂಗಳೂರು | ಕಾರು ಡಿಕ್ಕಿ: ವಿದ್ಯಾರ್ಥಿ ಬಲಿ

Prasthutha|

ಮಂಗಳೂರು: ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮುಡಿಪು ಬಳಿ ಇಂದು ನಡೆದಿದೆ.

- Advertisement -


ಕಾರ್ತಿಕ್ (14) ಮೃತ ಬಾಲಕ ಎಂದು ಗುರುತಿಸಲಾಗಿದೆ.


ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆ ಬದಿಯಲ್ಲಿ ನಿಂತಿದ್ದ. ಈ ವೇಳೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

- Advertisement -


ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.


ಮಂಗಳೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp