ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Prasthutha|

- Advertisement -

ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೆಎಸ್ ರಾವ್ ರಸ್ತೆಯ ಕರುಣಾ ಲಾಡ್ಜ್ ನಲ್ಲಿ ನಡೆದಿದೆ.

ಶುಕ್ರವಾರ ಬೆಳಗ್ಗೆ ಲಾಡ್ಜ್ ಸಿಬ್ಬಂದಿ ಬಾಗಿಲು‌ ತೆಗೆದು ನೋಡುವಾಗ ನಾಲ್ವರು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

- Advertisement -

ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದೆ.

ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮೈಸೂರು ನಿವಾಸಿ ದೇವೇಂದ್ರ ಸಹಿತ ಕುಟುಂಬಸ್ಥರು ಶವವಾಗಿ ಪತ್ತೆಯಾಗಿದ್ದಾರೆ. ದೇವೇಂದ್ರ (48), ಪತ್ನಿ ನಿರ್ಮಲಾ(45), ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಮೃತರೆಂದು ಗುರುತಿಸಲಾಗಿದೆ.

ದೇವೇಂದ್ರ ಅವರು ಮೂವರಿಗೂ ವಿಷವುಣಿಸಿ ಬಳಿಕ ತಾನೂ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಸಾಲ ತೀರಿಸಲಾಗದೆ ಆತ್ಮಹತ್ಯೆಗೈಯ್ಯುತ್ತಿರುವುದಾಗಿ ಡೆಟ್ ನೋಟ್ ನಲ್ಲಿ ಬರೆದಿರುವುದು ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಬಂದರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp