Home ಕರಾವಳಿ ಮಂಗಳೂರು | ಲಾಡ್ಜ್ ನಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ: ಕಾರಣ ನಿಗೂಢ

ಮಂಗಳೂರು | ಲಾಡ್ಜ್ ನಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ: ಕಾರಣ ನಿಗೂಢ

ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿಯ ಇಂಟರ್ ಸಿಟಿ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ,

ಬಂಟ್ವಾಳದ ಗುರುಪ್ರಸಾದ್ (36) ಎಂದು ಗುರುತಿಸಲಾಗಿದ್ದು, ಮೂರು ದಿನಗಳದರೂ ಬಾಗಿಲು ತೆರೆಯದೇ ಇರುವುದನ್ನು ಗಮನಿಸಿದ ಹೋಟೆಲ್ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ವ್ಯಕ್ತಿ ಮೃತಪಟ್ಟಿದ್ದು ಕಂಡುಬಂದಿದೆ.

ಗುರುಪ್ರಸಾದ್ ಅವರ ಮೃತದೇಹವು ರಕ್ತ ಸಿಕ್ತವಾಗಿದ್ದು, ಮೈಮೇಲೆ ಗಾಯಗಳಿದ್ದು, ಇದೊಂದು ಕೊಲೆಯೇ ಅಥವಾ ಇನ್ನಿತರ ಕಾರಣಗಳಿಂದ ಮೃತಪಟ್ಟಿರಬಹುದೇ ಎಂದು ಅನುಮಾನಗಳಿದ್ದು, ಪೊಲೀಸರ ತನಿಖೆಯಿಂದ ನಿಜಾಂಶ ಬೆಳಕಿಗೆ ಬರಬೇಕಾಗಿದೆ.

ಸ್ಥಳಕ್ಕೆ ಪಾಂಡೇಶ್ವರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp
Exit mobile version