ಮಂಗಳೂರು| ವ್ಯಕ್ತಿ ನಿಗೂಢ ಸಾವು; ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಮಂಗಳೂರು: ವ್ಯಕ್ತಿಯೊಬ್ಬರು ಮನೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಮುಲ್ಕಿಯ ಕಿಲ್ಪಾಡಿ ಮದಕ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಸುಧೀರ್ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಮದ್ಯ ವ್ಯಸನಿಯಾಗಿರುವ ಸುಧೀರ್  ಕೆಲ ಸಮಯದ ಹಿಂದೆ ಪತ್ನಿ ಜೊತೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿದ್ದು, ಪತ್ನಿ ತವರು ಮನೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಎಸ್ ಇ ಝೆಡ್ ನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಸುಧೀರ್ ಶೆಟ್ಟಿ ಕಳೆದ ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿರುವುದನ್ನು ಗಮನಿಸಿದ ಸಂಬಂಧಿಕರು ಫೋನ್ ಮೂಲಕ ಸಂಪರ್ಕಿಸಲು ಯತ್ನಿಸಿ ವಿಫಲಗೊಂಡಿದ್ದರು.

ಮನೆಗೆ ಬಂದು ಮಂಗಳವಾರ ಸಂಜೆ ವೇಳೆ ಪರಿಶೀಲಿಸಿದಾಗ ಕೊಳೆತ ಸ್ಥಿತಿಯಲ್ಲಿ ಸುಧೀರ್ ಶೆಟ್ಟಿ ಶವ ಪತ್ತೆಯಾಗಿದೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ತೆರವುಗೊಳಿಸಿದ್ದಾರೆ. ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.