ಮಂಗಳೂರು | ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಪತ್ತೆ !

Prasthutha|

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ.

- Advertisement -


ಮೂವರು ವಿದ್ಯಾರ್ಥಿನಿಯರು ಮಂಗಳೂರು ರೈಲು ನಿಲ್ದಾಣ ಮೂಲಕ ಕೊಯಂಬತ್ತೂರಿಗೆ ಪ್ರಯಾಣಿಸಿರುವ ಬಗ್ಗೆ ಮಾಹಿತಿ ಪಡೆದ ಮಂಗಳೂರು ಪೊಲೀಸರು, ಚೆನ್ನೈ ಪೊಲೀಸರಿಗೆ ನಾಪತ್ತೆ ಕುರಿತು ಮಾಹಿತಿ ನೀಡಿದ್ದರು. ಚೆನ್ನೈನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವಿದ್ಯಾರ್ಥಿನಿಯರನ್ನು ವಿಚಾರಣೆ ನಡೆಸಿ ಮಂಗಳೂರಿಗೆ ಕರೆತರಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಬುಧವಾರ ಮುಂಜಾನೆ ಸುಮಾರು 3.30 ಕ್ಕೆ ಬೆಂಗಳೂರಿನ ಇಬ್ಬರು ಹಾಗೂ ಚಿಕ್ಕಮಗಳೂರಿನ ಓರ್ವ ವಿದ್ಯಾರ್ಥಿನಿ ಹಾಸ್ಟೆಲ್ ನ ಕಿಟಕಿ ಮುರಿದು ಹೊರಬಂದು ಕಾಣೆಯಾಗಿದ್ದರು.




Join Whatsapp