ಮಂಗಳೂರು: ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರಿಂದ ನೋಟಿಸ್

Prasthutha|

- Advertisement -

ಮಂಗಳೂರು: ಉಳ್ಳಾಲ ತಾಲೂಕಿನ ಹರೇಕಳದಲ್ಲಿ ಅಳವಡಿಸಲಾದ ಟಿಪ್ಪು ಸುಲ್ತಾನ್ ಕಟೌಟ್​ ತೆರವುಗೊಳಿಸುವಂತೆ ಡಿವೈಎಫ್ ಐ ಸಂಘಟನೆಗೆ ಕೊಣಾಜೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಫೆ.16 ರಂದು ಡಿವೈಎಫ್ಐ ಆರು ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ಅಳವಡಿಸಿತ್ತು. ಯಾವುದೇ ಅನುಮತಿ ಪಡೆಯದೇ ಅಳವಡಿಸಿರುವುದರಿಂದ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕೂಡಲೇ ಕಟೌಟ್​​ ತೆರವು ಮಾಡುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.



Join Whatsapp