ಹಿಜಾಬ್ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ವಿದ್ಯಾರ್ಥಿನಿಗೆ ಮಂಗಳೂರು ವಿವಿ ನೋಟಿಸ್ !

Prasthutha|

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಿಜಾಬ್ ನಿಷೇಧ ಹೇರಿರುವುದರ ವಿರುದ್ಧ ಪತ್ರಿಗೋಷ್ಠಿ ನಡೆಸಿದ ಸಂತ್ರಸ್ತ ವಿದ್ಯಾರ್ಥಿನಿ ಗೌಸಿಯಾ ಅವರಿಗೆ ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರು ನೋಟಿಸ್ ಜಾರಿ ಮಾಡಿದ್ದಾರೆ.

- Advertisement -

ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಶಿರವಸ್ತ್ರ ಧರಿಸಿ ತರಗತಿಗೆ ಹಾಜರಾಗುವಂತಿಲ್ಲ ಎಂಬ ಆದೇಶವಿದೆ. ಈ ಬಗ್ಗೆ ವಿಶ್ವವಿದ್ಯಾಲಯ ಮಾರ್ಗಸೂಚಿ ಹಾಗೂ ಹೈಕೋರ್ಟಿನ ಆದೇಶವನ್ನು ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಗಿದೆ. ಈ ಕಾಲೇಜಿನಲ್ಲಿ ಸುಮಾರು 1600 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕೇವಲ ಬೆರಳೆಣಿಕೆಯ ವಿದ್ಯಾರ್ಥಿಗಳು ಕಾಲೇಜಿಗೆ ಬಂದು ತರಗತಿಗಳಿಗೆ ಹಾಜರಾಗದೇ ಕಾಲೇಜಿನ ಆವರಣದಲ್ಲಿ ಆತಂಕ, ಶಾಂತಿಭಂಗ ಮತ್ತು ಅಶಿಸ್ತು ಸೃಷ್ಟಿ ಮಾಡುತ್ತಿರುವುದು ಕಂಡುಬಂದಿದೆ. ಮಾತ್ರವಲ್ಲ ನೀವು ಬಾಹ್ಯಶಕ್ತಿಗಳ ಜೊತೆ ಸೇರಿಕೊಂಡು ಪತ್ರಿಕಾಗೋಷ್ಠಿ ನಡೆಸಿ ಕಾಲೇಜು, ಪ್ರಾಂಶುಪಾಲರ ವಿರುದ್ಧ ಕೆಲವೊಂದು ಹೇಳಿಕೆ ನೀಡಿ ಕಾಲೇಜಿನ ಘನತೆಗೆ ಧಕ್ಕೆ ಉಂಟು ಮಾಡಿರುವುದು ಗಮನಿಸಲಾಗಿದೆ. ಈ ರೀತಿಯ ವರ್ತನೆಯ ಬಗ್ಗೆ ನಿಮ್ಮ ಮೇಲೆ ಯಾಕೆ ಶಿಸ್ತು  ಕ್ರಮಕೈಗೊಳ್ಳಬಾರದು ಎನ್ನುವ ಬಗ್ಗೆ ಸಮಜಾಯಿಷಿಕೆಯನ್ನು ಈ ಪತ್ರ ತಲುಪಿದ ಮೂರು ದಿನಗಳೊಳಗೆ ಪ್ರಾಂಶುಪಾಲರಿಗೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ.



Join Whatsapp