ಮಂಗಳೂರು: ಪಿಎಂ ವಿಶ್ವಕರ್ಮ ಯೋಜನೆಗೆ ಚಾಲನೆ

Prasthutha|

- Advertisement -

ಮಂಗಳೂರು,ಸೆ.17.(ಕ.ವಾ):- ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಪಿಎಂ ವಿಶ್ವಕರ್ಮ ಯೋಜನೆಗೆ ಸೆ.17ರ ಭಾನುವಾರ ನಗರದ ಡಾ. ಟಿ.ಎಂ.ಎ. ಪೈ ಅಂತರಾಷ್ಟ್ರೀಯ ಕನ್ವೆನ್ಷನ್ ಹಾಲ್ ನಲ್ಲಿ ಕೇಂದ್ರ ಸರ್ಕಾರದ ಮೀನುಗಾರಿಕೆ, ಪಶುಸಂಗೋಪನೆ ಹಾಗೂ ಹೈನುಗಾರಿಕೆ ಸಚಿವರಾದ ಪರ್ಷೋತ್ತಮ್ ರೂಪಾಲಾ ಅವರು ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಮಂಕಾಳ್ ಎಸ್. ವೈದ್ಯ, ವಿಧಾನಸಭೆಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ , ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಮೇಯರ್ ಸುಧೀರ್ ಶೆಟ್ಟಿ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ. ಪಿ, ಕೇಂದ್ರದ ಮೀನುಗಾರಿಗೆ ಇಲಾಖೆಯ ಜಂಟಿ ಕಾರ್ಯದರ್ಶಿ ನೀತು ಕುಮಾರ್ ಪ್ರಸಾದ್, ರಾಜ್ಯ ಮೀನುಗಾರಿಕಾ ನಿರ್ದೇಶಕ ದಿನೇಶ್ ಕುಮಾರ್, ಮೀನುಗಾರಿಕಾ ಇಲಾಖೆಯ ಉಪ ಆಯುಕ್ತ ಸಂಜಯ್ ಪಾಂಡೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

ನೂರಾರು ವಿಶ್ವಕರ್ಮ ಸಮುದಾಯದವರು ಭಾಗವಹಿಸಿದ್ದರು.