ಮಂಗಳೂರು ವಿವಿಯ 40ನೇ ವಾರ್ಷಿಕ ಘಟಿಕೋತ್ಸವ: 52 ಮಂದಿಗೆ ಚಿನ್ನದ ಪದಕ ಪ್ರದಾನ

Prasthutha|

ಮಂಗಳೂರು: ಭಾರತಕ್ಕೆ ವಿಶ್ವಗುರುವಿನ ಗೌರವವನ್ನು ಮತ್ತೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವೆಲ್ಲರೂ ದೃಢ ಹೆಜ್ಜೆ ಇಡಬೇಕು. ಇದಕ್ಕೆ ಯುವಕರು ಕೈಜೋಡಿಸಬೇಕು ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ ನೀಡಿದರು.

- Advertisement -

ಶನಿವಾರ ಕೋಣಾಜೆಯಲ್ಲಿರುವ ಮಂಗಳ ಗಂಗೋತ್ರಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ 40ನೇ ವಾರ್ಷಿಕ ಘಟಿಕೋತ್ಸಕ್ಕೆ ವಿಶ್ವವಿದ್ಯಾಲಯದ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಚಾಲನೆ ನೀಡಿ ಮಾತನಾಡಿದರು.

ಯುವ ಸಮುದಾಯವು ಸಂವಿಧಾನಾತ್ಮಕ ಕರ್ತವ್ಯಗಳನ್ನು ನಿಭಾಯಿಸಿ ‘ಏಕ ಭಾರತ ಶ್ರೇಷ್ಠ ಭಾರತ’ ನಿರ್ಮಿಸುವ ಗುರಿ ನಾವು ಹೊಂದಬೇಕಿದೆ. ನಾವೆಲ್ಲರೂ ದೃಢಹೆಜ್ಜೆಯನ್ನು ಇಡಬೇಕಿದೆ. ಜ್ಞಾನ ಗಳಿಸುವುದು ಶಿಕ್ಷಣದ ಮೂಲ ಉದ್ದೇಶವಾಗಿದೆ. ಶಿಕ್ಷಣದಿಂದ ಸರ್ವಾಂಗೀಣ ಪ್ರಗತಿಗೆ ದಾರಿ ದೊರಕುತ್ತದೆ. ಭಾರತದ ಲೋಕತಾಂತ್ರಿಕ ದೇಶ. ಭಾರತದ ದೇಶದ ಸಂವಿಧಾನದಲ್ಲಿರುವ ಕರ್ತವ್ಯವನ್ನು ನಿಭಾಯಿಸುವಲ್ಲಿ, ದೇಶದ ಜನಾಂಗದ ಸರ್ವಾಂಗೀಣ ವಿಕಾಸದ ದೃಷ್ಟಿಯಲ್ಲಿ ಎಲ್ಲರು ಪ್ರಯತ್ನ ಮಾಡಬೇಕು. ಸ್ವಾವಲಂಬಿ ಬದುಕು ಮತ್ತು ಸ್ವಾವಲಂಬಿ ಭಾರತ ನಿರ್ಮಾಣದ ದಿಸೆಯಲ್ಲಿ ಶಿಕ್ಷಣ ಮಹತ್ತರವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದ ಬಳಿಕ ತಮ್ಮ ಸಮಾಜ ಮತ್ತು ದೇಶದ ಬಗ್ಗೆ ಗೌರವಾದರಗಳನ್ನು ಬೆಳೆಸಿಕೊಂಡು ಆತ್ಮ ಸಂತೃಪ್ತಿಯ ಜತೆಗೆ ಬದುಕು ರೂಪಿಸಿಕೊಳ್ಳಬೇಕು ಎಂದು ಕರೆ ನೀಡಿದರು.

- Advertisement -

ಹೇಮಾವತಿ ವಿ ಹೆಗ್ಗಡೆ ಅವರಿಗೆ ಶಿಕ್ಷಣ ಮತ್ತು ಮಾನವಿಕ ಕ್ಷೇತ್ರದಲ್ಲಿ ಅವರ ಅಭೂತಪೂರ್ವ ಕೊಡುಗೆಗಾಗಿ, ಹರಿಕೃಷ್ಣ ಪುನೂರ್ ಅವರು ಸಾಹಿತ್ಯ ಮತ್ತು ಸಾಮಾಜಿಕ ಸೇವೆಗಳಲ್ಲಿ ಗಮನಾರ್ಹ ಕೆಲಸ ಮಾಡುತ್ತಿದ್ದಾರೆ ಮತ್ತು ಲಲಿತಕಲೆ ಕ್ಷೇತ್ರದಲ್ಲಿ ವಿಶೇಷವಾಗಿ ತುಳು ನಾಟಕ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಅವರ ಅಮೂಲ್ಯ ಕೊಡುಗೆಗಾಗಿ ದೇವದಾಸ್ ಕಾಪಿಕಾಡ್ ಅವರಿಗೆ ಗೌರವ ಪದವಿ ನೀಡಿ ಗೌರವಿಸಲಾಗಿದೆ, ಈ ಸಾಧಕರು ಇದೇ ರೀತಿ ಸಮಾಜ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಯುವಜನತೆಗೆ ಸ್ಪೂರ್ತಿಯಾಗಿರಬೇಕು ಎಂದು ಹೇಳಿದರು.

ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಾದ ಜಸ್ಟೀಸ್ ಎಸ್. ಅಬ್ದುಲ್ ನಝೀರ್ ಅವರು ಘಟಿಕೋತ್ಸವದ ಭಾಷಣ ಮಾಡಿದರು.
ಕುಲಪತಿ ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ ಪ್ರಸ್ತಾವಿಕವಾಗಿ ಮಾತನಾಡಿದರು. ಕುಲಸಚಿವರಾದ ಪ್ರೊ. ಪಿ.ಎಲ್. ಧರ್ಮ, ಕುಲಸಚಿವರಾದ ಪ್ರೊ. ಕಿಶೋರ್ ಕುಮಾರ್, ಸಿಂಡಿಕೆಟ್ ಸದಸ್ಯರು, ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ 153 ಪಿಎಚ್ ಡಿ ಮತ್ತು 52 ಮಂದಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು.



Join Whatsapp