ಮಂಗಳೂರು | ಬುರ್ಖಾ ಧರಿಸಿ ಅಸಭ್ಯ ನೃತ್ಯ; ವಿದ್ಯಾರ್ಥಿಗಳ ಅಮಾನತು

Prasthutha|

ಮಂಗಳೂರು: ಖಾಸಗಿ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಮತ್ತು ಹಿಜಾಬ್ ಧರಿಸಿ ‘ಐಟಂ ಸಾಂಗ್‌’ಗೆ ಅಸಭ್ಯ ನೃತ್ಯ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

- Advertisement -


ಮಂಗಳೂರಿನ ವಾಮಂಜೂರಿನಲ್ಲಿರುವ ಸೈಂಟ್ ಜೋಸೆಫ್ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಈ ನೃತ್ಯ ಮಾಡಿರುವುದಾಗಿ ವರದಿಯಾಗಿದೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಮತ್ತು ಹಿಜಾಬ್ ಅನ್ನು ಅಣಕಿಸುವಂತೆ ಬಾಲಿವುಡ್‌ನ ‘ಐಟಂ ಸಾಂಗ್‌’ಗೆ ಅಸಭ್ಯ ಹೆಜ್ಜೆಗಳನ್ನು ಹಾಕಿದ್ದಾರೆ. ಇದರ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ ಬಳಿಕ ವಿಷಯ ಅರಿತುಕೊಂಡ ಕಾಲೇಜಿನ ಆಡಳಿತ ಮಂಡಳಿ, ನೃತ್ಯ ಮಾಡಿದ ನಾಲ್ವರೂ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ. ನೃತ್ಯ ಮಾಡಿದ ನಾಲ್ವರು ವಿದ್ಯಾರ್ಥಿಗಳು ಮುಸ್ಲಿಂ ಸಮುದಾಯದವರಾಗಿದ್ದಾರೆ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.

Join Whatsapp