ಮಂಗಳೂರು | ವೀಕೆಂಡ್ ಕರ್ಫ್ಯೂ : ಜನ ಸಂಚಾರ ವಿರಳ

Prasthutha: January 15, 2022

ಮಂಗಳೂರು: ವೀಕೆಂಡ್ ಕರ್ಫ್ಯೂ ಜಾರಿಯಾದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸಿದರು.

ಶುಕ್ರವಾರ ರಾತ್ರಿ 10ರಿಂದ ಆರಂಭವಾಗಿದ್ದು, ಸೋಮವಾರ ಬೆಳಗ್ಗೆ 5ರ ತನಕ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 36 ಚೆಕ್ ಪೋಸ್ಟ್ ಹಾಕಲಾಗಿದ್ದು, ಗಡಿ ಭಾಗಗಳಲ್ಲಿ ಆರಕ್ಕೂ ಅಧಿಕ ತಪಾಸಣಾ ಕೇಂದ್ರ ತೆರೆಯಲಾಗಿದೆ.

ಜಿಲ್ಲೆಯಲ್ಲಿ ಎಂದಿನಂತೆ ಬಸ್ ಸಂಚಾರ ಆರಂಭವಾಗಿದ್ದು, ಕಳೆದ ವಾರದ ವೀಕೆಂಡ್ ಕರ್ಫ್ಯೂಗೆ ಹೋಲಿಸಿದರೆ ಪ್ರಯಾಣಿಕರ ಸಂಖ್ಯೆ  ಕಡಿಮೆ ಇದೆ. ಅದೇರೀತಿ ಜನ ಸಂಚಾರವೂ ವಿರಳವಾಗಿದೆ. 

ಮಂಗಳೂರಿನ ಕ್ಲಾಕ್ ಟವರ್ ಬಳಿ ಡಿಸಿಪಿ ಬ್ಯಾರಿಕೇಡ್ ಗಳನ್ನು ಅಳವಡಿಸಿರುವ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!