ಮಂಗಳೂರು | ಸಮುದ್ರಪಾಲಾಗುತ್ತಿದ್ದ ಮೂವರ ರಕ್ಷಣೆ: ಮಹಿಳೆ ಸಾವು

Prasthutha|

ಮಂಗಳೂರು: ಸಮುದ್ರತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರಪ್ರದೇಶದ ನಾಲ್ವರು ಮಹಿಳೆಯರಲ್ಲಿ ಒಬ್ಬರು ಸಮುದ್ರಪಾಲಾಗಿದ್ದು, ಉಳಿದ ಮೂವರನ್ನು ಸ್ಥಳೀಯರು ರಕ್ಷಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ.

- Advertisement -


ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್. ಪ್ರಸನ್ನ ಎಂಬುವವರ ಪತ್ನಿ ಪರಿಮಿ ರತ್ನ ಕುಮಾರಿ (57) ಮೃತಪಟ್ಟವರು.


ಉಳ್ಳಾಲ ಕಡಲತೀರದಲ್ಲಿ ವಿಹರಿಸುತ್ತಿದ್ದ ಸಂದರ್ಭದಲ್ಲಿ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ನಾಲ್ವರು ಮಹಿಳೆಯರನ್ನು ನೀರಿಗೆ ಎಳೆದೊಯ್ದಿತು. ಸ್ಥಳೀಯರು ತಕ್ಷಣ ನಾಲ್ವರನ್ನು ಸಮುದ್ರದಿಂದ ಹೊರಗೆಳೆದು ರಕ್ಷಿಸಿದ್ದಾರೆ. ಇವರಲ್ಲಿ ಪರಿಮಿ ರತ್ನ ಕುಮಾರಿ ಪ್ರಜ್ಞೆ ತಪ್ಪಿದ್ದರು. ತಕ್ಷಣ ಅವರನ್ನು ದೇರಳಕಟ್ಟೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.

Join Whatsapp