ಮಂಗಳೂರು | ಮಹಿಳೆ ಕೊಲೆ ಪ್ರಕರಣ: ಆಟೋ ಚಾಲಕನ ಬಂಧನ

Prasthutha|

- Advertisement -

ಮಂಗಳೂರು: ಶಕುಂತಳ ಕೊಲೆ‌‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.‌ ಬಂಧಿತ ಆರೋಪಿಯನ್ನು ಶ್ರೀಧರ್ ಎಂದು ಗುರುತಿಸಲಾಗಿದೆ.

ಪ್ರಕರಣ ಸಂಬಂಧ ಶಕುಂತಳಾ ಅವರ ಪತಿ ಸಂಜೀವ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -

ಮಾಣಿಯ ನೇರಳಕಟ್ಟೆ ಬಳಿ ಆಟೋದಲ್ಲಿ ಬಂದ ದುಷ್ಕರ್ಮಿಗಳ ತಂಡವೊಂದು ಸೋಮವಾರ ಶಕುಂತಳ ಮೇಲೆ ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿತ್ತು.

Join Whatsapp