ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ

Prasthutha|

ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ಮಾಲೆಮಾರ್ ಬಳಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.

- Advertisement -


ಪಂಜಿಮೊಗರು ನಿವಾಸಿ ರಾಜೇಶ್ (45)ಗಾಯಗೊಂಡವರು. ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ ಸಾಗುತ್ತಿದ್ದಾಗ ಮಾಲೆಮಾರ್ ಬಳಿ ಅಪರಿಚಿತ ದುಷ್ಕರ್ಮಿಗಳು ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ.

Join Whatsapp