Home ಕರಾವಳಿ ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ

ಮಂಗಳೂರು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಗೆ ದುಷ್ಕರ್ಮಿಗಳಿಂದ ಚೂರಿ ಇರಿತ

ಮಂಗಳೂರು: ನಗರದ ಕಾವೂರು ಠಾಣಾ ವ್ಯಾಪ್ತಿಯ ಮಾಲೆಮಾರ್ ಬಳಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ.


ಪಂಜಿಮೊಗರು ನಿವಾಸಿ ರಾಜೇಶ್ (45)ಗಾಯಗೊಂಡವರು. ರಾಜೇಶ್ ಎಂದಿನಂತೆ ಕೆಲಸ ಮುಗಿಸಿ ಕೊಟ್ಟಾರದಿಂದ ಸಾಗುತ್ತಿದ್ದಾಗ ಮಾಲೆಮಾರ್ ಬಳಿ ಅಪರಿಚಿತ ದುಷ್ಕರ್ಮಿಗಳು ಬೆನ್ನಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ರಾಜೇಶ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಕಾವೂರು ಠಾಣೆಯಲ್ಲಿ ದೂರು ದಾಖಲಾಗಿದೆ.

Join Whatsapp
Exit mobile version