ಮಂಗಳೂರು | ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕನಿಗೆ ಗಾಯ: ಆಸ್ಪತ್ರೆಗೆ ದಾಖಲು

Prasthutha|

ಮಂಗಳೂರು: ಹುಲಿವೇಷ ಕುಣಿತದ ವೇಳೆ ದುರ್ಘಟನೆಯೊಂದು ಸಂಭವಿಸಿದೆ. ಹುಲಿವೇಷ ಕುಣಿತದ ವೇಳೆ ಆಯತಪ್ಪಿ ಬಿದ್ದು ಯುವಕ ಗಾಯಗೊಂಡಿರುವ ಘಟನೆ ಮಂಗಳೂರಿನ ಮಂಗಳಾದೇವಿ ದೇವಸ್ಥಾನದಲ್ಲಿ ನಡೆದಿದೆ.

- Advertisement -


ಕುಣಿತದ ವೇಳೆ ಹುಲಿವೇಷಧಾರಿಯೊಬ್ಬ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದಾಗ ಆಯತಪ್ಪಿ ಬಿದ್ದಿದ್ದಾನೆ. ಯುವಕನ ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿ ಗಾಯಗೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಯುವಕನಿಗೆ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಯುವಕ ಪ್ರಯಾಪಾಯದಿಂದ ಪಾರಾಗಿದ್ದಾನೆ.