ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳ ಸಾವು

Prasthutha|

ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಜೋಕಟ್ಟೆ ಅಂಗರಗುಂಡಿ ಬಳಿ ನಡೆದಿದೆ.
ಮೇ.14ರ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಈ ಘಡನೆ ಸಂಭವಿಸಿದೆ.

- Advertisement -

ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದ ಗೂಡ್ಸ್ ರೈಲಿನಡಿಗೆ ಎಮ್ಮೆಗಳು ಬಿದ್ದಿದ್ದು, ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಸತತ ಮೂರು ಗಂಟೆ ಕಾರ್ಯಾಚರಣೆ ನಡೆಸಿ ಮೂರು ಎಮ್ಮೆಗಳನ್ನು ರಕ್ಷಿಸಿದ್ದಾರೆ.

ಕೆಲವು ಎಮ್ಮೆಗಳು ಸುಮಾರು 25 ಅಡಿ ಆಳಕ್ಕೆ ಬಿದ್ದು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.

Join Whatsapp