Home ಟಾಪ್ ಸುದ್ದಿಗಳು ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ, 222 ಮಂದಿಯ ಡಿಎಲ್ ರದ್ದತಿಗೆ ಶಿಫಾರಸು.!

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆ, 222 ಮಂದಿಯ ಡಿಎಲ್ ರದ್ದತಿಗೆ ಶಿಫಾರಸು.!

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ 222 ಮಂದಿ ಚಾಲಕ, ಸವಾರರ ವಾಹನ ಚಾಲನಾ ಪರವಾನಗಿ (ಡಿಎಲ್) ರದ್ದುಗೊಳಿಸಲು ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಿದೆ.


ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ನ ಸಂಚಾರ ಉಪ ವಿಭಾಗದ ಅಧೀನ ಠಾಣಾ ವ್ಯಾಪ್ತಿಯ ರಸ್ತೆಗಳಲ್ಲಿ ಅಜಾಗರೂಕತೆ ಹಾಗೂ ನಿರ್ಲಕ್ಷತದಿಂದ ಚಾಲನೆ ಹಾಗೂ ಸಂಚಾರ ನಿಯಮ ಪಾಲನೆ ಮಾಡದಿರುವ ಸವಾರರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.


ಜುಲೈ 13 ರಿಂದ 26ರವರೆಗೂ ಅತಿ ವೇಗದ, ನಿರ್ಲಕ್ಷ್ಯದ ಚಾಲನೆಗಾಗಿ 113 ಸೇರಿದಂತೆ ಒಟ್ಟಾರೇ 222 ಚಾಲಕರ ಚಾಲನಾ ಪರವಾನಗಿ ಅಮಾನತುಗೊಳಿಸುವಂತೆ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ನಗರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp
Exit mobile version