ಮಂಗಳೂರು: ಫೆಲೆಸ್ತೀನ್ ಮೇಲೆ ಇಸ್ರೇಲ್ ನಡೆಸುತ್ತಿರುವ ಕ್ರೌರ್ಯವನ್ನು ಖಂಡಿಸಿ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ ಎಡಪಕ್ಷಗಳ ಮುಖಂಡರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಎಸ್ಐ ಪ್ರವೀಣ್ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ಎಡಪಕ್ಷಗಳ ನಾಯಕರಾದ ವಸಂತ ಆಚಾರಿ, ಸುನಿಲ್ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಯಾಧವ ಶೆಟ್ಟಿ, ನಾಗೇಶ್ ಕೋಟ್ಯಾನ್, ಸಂತೋಷ್ ಬಜಾಲ್, ಸುಕುಮಾರ್ ರಾವ್, ಇಮ್ತಿಯಾಝ್, ಮುನೀರ್ ಕಾಟಿಪಳ್ಳ, ಹಯವದನ ರಾವ್, ಸೀತಾರಾಮ ಬೆರಿಂಜ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಪ್ರತಿಭಟನೆಗೆ ಅನುಮತಿ ಇಲ್ಲದಿದ್ದರೂ ಗುಂಪುಗೂಡಿ, ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದ್ದಾರೆಂದು ಪ್ರಕರಣ ದಾಖಲಾಗಿದೆ.
ಇನ್ನು ಈ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಪೊಲೀಸರ ಕ್ರಮದ ಬಗ್ಗೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.