ಮಂಗಳೂರು: ರಸ್ತೆ ಬದಿ ಕಸ ಎಸೆಯುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಂಗಳೂರು ಮಹಾನಗರ ಪಾಲಿಕೆಯು 20 ಸಾವಿರ ರೂ. ದಂಡ ವಿಧಿಸಿದೆ. ನಗರದ ಕಂಕನಾಡಿ ಮಾರುಕಟ್ಟೆ ರಸ್ತೆ ಬದಿಗೆ ಕಸ ಎಸೆಯುತ್ತಿದ್ದ ಫಾಸ್ಟ್ ಫುಡ್ ನೌಕರನಿಗೆ ಪಾಲಿಕೆಯು ದಂಡ ವಿಧಿಸಿದೆ.
ಈ ಜಾಗದಲ್ಲಿ ಕಸ ಎಸೆದ ಪರಿಣಾಮ ಬ್ಲ್ಯಾಕ್ ಸ್ಪಾಟ್ ನಿರ್ಮಾಣಗೊಂಡಿತ್ತು. ಮಂಗಳೂರು ಮಹಾನಗರ ಪಾಲಿಕೆಯು ಬಳಿಕ ಆ ಪ್ರದೇಶವನ್ನು ಸುಂದರಗೊಳಿಸಿತ್ತು. ಅದರ ನಂತರ ಕಸ ಎಸೆಯುವುದು ನಿಯಂತ್ರಣಕ್ಕೆ ಬಂದಿದ್ದರೂ ಇತ್ತೀಚೆಗೆ ಕೆಲವರು ಕಸ ಎಸೆಯುತ್ತಿದ್ದರು. ಇದನ್ನು ಗಮನಿಸಿದ ಮನಪಾ ಅಧಿಕಾರಿಗಳು ದಾಳಿ ನಡೆಸಿ ಕಸ ಎಸೆಯುತ್ತಿದ್ದ ಫಾಸ್ಟ್ ಫುಡ್ ನೌಕರನಿಗೆ 20 ಸಾವಿರ ರೂ. ದಂಡ ವಿಧಿಸಿದ್ದಾರೆ.