►ತಣ್ಣಗಿದ್ದ ಹಿಜಾಬ್ v/s ಕೇಸರಿ ಮತ್ತೆ ಆರಂಭ !
ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿಗೆ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿ ಬಂದಿದ್ದನ್ನು ವಿರೋಧಿಸಿ ಇತರ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗುರುವಾರ ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಹಾಕಲು ಅವಕಾಶ ನೀಡಲಾಗಿದೆ ಎಂದು ಆರೋಪಿಸಿ, ನಮಗೂ ಕೇಸರಿ ಶಾಲು ಹಾಕಲು ಅವಕಾಶ ಕೊಡಿ ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಒತ್ತಾಯಿಸಿದರು.
ಹಿಜಾಬ್ ಧರಿಸಲು ಈ ಹಿಂದೆ ನೀಡಿದ್ದ ಅವಕಾಶವನ್ನು ಸಿಂಡಿಕೇಟ್ ಸಭೆಯಲ್ಲಿ ಹಿಂಪಡೆಯಲಾಗಿದೆ. ಆದರೆ ಈ ನಿಯಮ ಸಮರ್ಪಕವಾಗಿ ಪಾಲನೆಯಾಗುತ್ತಿಲ್ಲ. ಕಾಲೇಜಿನಲ್ಲಿ ಒಟ್ಟು 44 ಮುಸ್ಲಿಮ್ ವಿದ್ಯಾರ್ಥಿನಿಯರಿದ್ದು, ಅವರಲ್ಲಿ ಬಹುತೇಕ ಮಂದಿ ಹಿಜಾಬ್ ಧರಿಸಿ ಬರುತ್ತಿದ್ದಾರೆ ಎಂದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಯೊಬ್ಬ ಆರೋಪಿಸಿದ್ದಾನೆ.