Home ಟಾಪ್ ಸುದ್ದಿಗಳು ಮಂಗಳೂರು: AK ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ನಿಧನ

ಮಂಗಳೂರು: AK ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ ನಿಧನ

ಮಂಗಳೂರು: ಎ ಕೆ ಸಮೂಹ ಸಂಸ್ಥೆಗಳ ಸ್ಥಾಪಕ ಎ ಕೆ ಅಹ್ಮದ್ (76) ಅವರು ಇಂದು ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಹೈಲ್ಯಾಂಡ್ ನ ಇಹ್ಸಾನ್ ಮಸೀದಿಯ ಸ್ಥಾಪಕಾಧ್ಯಕ್ಷರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಸರಳ ಸಜ್ಜನ ವ್ಯಕ್ತಿತ್ವದ ಪರೋಪಕಾರಿ ಮನೋಭಾವದವರಾಗಿದ್ದರು. ಎ ಕೆ ಗ್ರೂಪ್ ಅನ್ನು ಪ್ರಾರಂಭಿಸಿ ಯಶಸ್ಸಿನ ಉತ್ತುಂಗಕ್ಕೆ ಒಯ್ದು ಪ್ರತಿಷ್ಠಿತ ಬ್ರ್ಯಾಂಡ್ ಆಗಿ ಪರಿವರ್ತಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು.


ಅವರು ಪತ್ನಿ,ನಾಲ್ಕು ಗಂಡು ಮಕ್ಕಳು ಹಾಗು ಮೂರು ಹೆಣ್ಣು ಮಕ್ಕಳು ಹಾಗು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Join Whatsapp
Exit mobile version