ಮಂಗಳೂರು ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಗೆಲುವಿಗೆ ಪೂರಕ ವಾತಾವರಣವಿದೆ: ಇರ್ಷಾದ್ ಅಜ್ಜಿನಡ್ಕ

Prasthutha|

ಮಂಗಳೂರು: ಮುಂಬರುವ ಕರ್ನಾಟಕ ಅಸೆಂಬ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಪಕ್ಷ ತನ್ನ 2ನೇ ಪಟ್ಟಿಯನ್ನು ಇಂದು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಲಾಗಿದ್ದು, ಮಂಗಳೂರು (ಉಳ್ಳಾಲ) ಕ್ಷೇತ್ರದ ಉಮೇದುದಾರನಾಗಿ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕ್ಷೇತ್ರಾಧ್ಯಕ್ಷ ಇರ್ಷಾದ್ ಅಜ್ಜಿನಡ್ಕ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು, ಸಾಮಾಜಿಕ ಮುಂದಾಳು, ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರು ಪಕ್ಷದ ಉಳ್ಳಾಲದ ಕ್ಷೇತ್ರದ ಅಭ್ಯರ್ಥಿಯಾಗಿರುವುದು ಸಂತಸ ತಂದಿದೆ. ಅವರನ್ನು ವಿಜಯಗೊಳಿಸಲು ಮತ್ತು ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗಿದ್ದು, ರಿಯಾಝ್ ಫರಂಗಿಪೇಟೆ ಅವರು ವಿಜಯ ಪತಾಕೆ ಹಾರಿಸಲಿದ್ದಾರೆ ಎಂದು ತಿಳಿಸಿದರು.
ಉಳ್ಳಾಲದ ಜನತೆ ಕಳೆದ 37 ವರ್ಷಗಳಿಂದ ಅಭಿವೃದ್ಧಿಯಿಂದ ವಂಚಿತರಾಗಿದ್ದು, ಮೂಲಸೌಕರ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್.ಡಿ.ಪಿ.ಐ ಪಕ್ಷವು ಪರ್ಯಾಯ ರಾಜಕೀಯ ಶಕ್ತಿಯಾಗಿ ಜನರ ಆಯ್ಕೆಯಾಗಿದ್ದು, ಎಸ್.ಡಿ.ಪಿ.ಐ ಪಕ್ಷದ ಅಭ್ಯರ್ಥಿಯಾದ ರಿಯಾಝ್ ಫರಂಗಿಪೇಟೆ ಅವರು ಪ್ರಚಂಡ ಬಹುಮತದಿಂದ ಜಯಗಳಿಸಲಿದ್ದಾರೆ ಎಂಬ ಭರವಸೆಯಿದೆ ಎಂದು ಅವರು ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಿದರು.



Join Whatsapp