ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ: ಎನ್’ಐಎ ತನಿಖೆಗೆ ಅಧಿಕೃತ ಆದೇಶ

Prasthutha|

ಮಂಗಳೂರು: ಕಂಕನಾಡಿ ಸಮೀಪ ಇತ್ತೀಚೆಗೆ ಆಟೋ ರಿಕ್ಷಾದಲ್ಲಿ ಕುಕ್ಕರ್ ಸ್ಫೋಟ ಘಟನೆಗೆ ಸಂಬಂಧಿಸಿದಂತೆ ಮುಂದಿನ  ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ NIAಗೆ ವರ್ಗಾಯಿಸಿದ್ದು, ಕೇಂದ್ರ ಗೃಹ ಇಲಾಖೆಯು ರಾಜ್ಯದ ಶಿಫಾರಸನ್ನು ಮಾನ್ಯ ಮಾಡಿ,  ಇಂದು ಆಜ್ಞೆ ಹೊರಡಿಸಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

- Advertisement -

ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡು ಕೇಂದ್ರ ತನಿಖಾ ಸಂಸ್ಥೆ NIA ಗೆ  ವಹಿಸಲು ಶಿಫಾರಸು ಮಾಡಲಾಗಿತ್ತು ಎಂದು ಜ್ಞಾನೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Join Whatsapp