ಮಂಗಳೂರು ಆಟೋ ರಿಕ್ಷಾ ಸ್ಫೋಟ ಪ್ರಕರಣ: ಶಾರೀಖ್ ಮನೆ ಮೇಲೆ ಪೊಲೀಸ್ ದಾಳಿ

ಶಿವಮೊಗ್ಗ: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋ ನಿಗೂಢವಾಗಿ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯಲ್ಲಿ ಆರೋಪಿ ಶಾರೀಖ್ ಹಾಗು ಆತನ ಸಂಬಂಧಿಕರ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.


ತೀರ್ಥಹಳ್ಳಿಯಲ್ಲಿ ನಾಲ್ಕು ಮನೆಗಳು ಹಾಗು ಸೊಪ್ಪುಗಡ್ಡೆಯಲ್ಲಿರುವ ಶಾರೀಖ್ ನಿವಾಸದಲ್ಲಿ ಶೋಧಕಾರ್ಯ ನಡೆಯುತ್ತಿದೆ.

- Advertisement -


ಶನಿವಾರ ಸಂಜೆ 4:30ರ ಸುಮಾರಿಗೆ ಗರೋಡಿ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪರಿಣಾಮ ಅದರ ಚಾಲಕ ಮತ್ತು ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿದ್ದರು. ಪ್ರಯಾಣಿಕನ ಬ್ಯಾಗಿನಲ್ಲಿ ಇದ್ದ ವಸ್ತುವಿನಿಂದ ಬೆಂಕಿ ಕಾಣಿಸಿದೆ ಎಂದು ಎಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ನಿನ್ನೆ ತಿಳಿಸಿದ್ದರು.
ಈ ಮಧ್ಯೆ, ನಗರದ ಬಸ್ ನಿಲ್ದಾಣದ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಆರೋಪಿ ಶಾರೀಖ್ ಗುರುತು ಪತ್ತೆ ಹಚ್ಚಲು ನಿನ್ನೆ ಮಧ್ಯರಾತ್ರಿ ಶಿವಮೊಗ್ಗದಿಂದ ಆತನ ಪೋಷಕರನ್ನು ಪೊಲೀಸರು ಕರೆತಂದಿದ್ದಾರೆ.


ಶೇ.40ರಷ್ಟು ಶಾರೀಕ್ ದೇಹ ಸುಟ್ಟು ಹೋಗಿದ್ದು, ಮಂಗಳೂರಿನ ಕಂಕನಾಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಮುಖ ಬಾವು ಬಂದಿದ್ದ ಕಾರಣ ಪೊಲೀಸರಿಗೆ ಗುರುತು ಪತ್ತೆ ಮಾಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅನುಮಾನದ ಹಿನ್ನೆಲೆಯಲ್ಲಿ ಶಾರೀಕ್ ಹೆತ್ತವರನ್ನು ಕರೆಸಿದ್ದಾರೆ. ಪೋಷಕರಿಗೂ ಶಾರೀಕ್ ಗುರುತು ಪತ್ತೆಯಾಗಲಿಲ್ಲ ಎಂದರೆ ಕೊನೆಗೆ ಡಿಎನ್’ಎ ಟೆಸ್ಟ್ ಮಾಡಿಸುವ ಸಾಧ್ಯತೆ ಇದೆ.