ಮಂಗಳೂರು ಆಟೋ ಸ್ಫೋಟ ಪ್ರಕರಣ: ರಿಕ್ಷಾ ಚಾಲಕನಿಗೆ ಗೃಹ ಸಚಿವರಿಂದ ₹50,000 ನೆರವು

ಮಂಗಳೂರು: ನಾಗುರಿಯಲ್ಲಿ ನಡೆದ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ  ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಗೆ 50 ಸಾವಿರ ರೂಪಾಯಿ ನೆರವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ್ದಾರೆ.

ಪುರುಷೋತ್ತಮ ಪೂಜಾರಿ ಅವರನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ,  ವೈಯಕ್ತಿಕವಾಗಿ 50 ಸಾವಿರ ರೂಪಾಯಿ ಆರ್ಥಿಕ ನೆರವನ್ನು ಅವರ ಕುಟುಂಬದವರಿಗೆ ಹಸ್ತಾಂತರಿಸಿದರು. ಇದಕ್ಕೂ ಮೊದಲು ಕುಕ್ಕರ್ ಸ್ಫೋಟಗೊಂಡ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದ್ದಾರೆ