ಮಂಗಳೂರು: ಇಬ್ಬರು ಮುಸ್ಲಿಮ್ ಯುವಕರ ಮೇಲೆ ಹಲ್ಲೆ ನಡೆಸಿದ ಬಜರಂಗದಳ ಕಾರ್ಯಕರ್ತರು

Prasthutha|

ಮಂಗಳೂರು: ಬೈಕ್’ನಲ್ಲಿ ತೆರಳುತ್ತಿದ್ದ ಇಬ್ಬರು ಮುಸ್ಲಿಮ್ ಯುವಕರನ್ನು ಬಜರಂಗದಳದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಮಂಗಳೂರು ತಾಲೂಕಿನ ಮೂಡುಶೆಡ್ಡೆ ಎಂಬಲ್ಲಿ ನಡೆದಿದೆ.

- Advertisement -


ಸುರತ್ಕಲ್ ಚೊಕ್ಕಬೆಟ್ಟು ನಿವಾಸಿಗಳಾದ ರಮೀಝ್ ಹಾಗೂ ಸಮೀರ್ ಮೇಲೆ ಹಲ್ಲೆ ನಡೆಸಲಾಗಿದೆ.


ಸೋಮವಾರ ರಾತ್ರಿ ರಮೀಝ್ ಹಾಗೂ ಸಮೀರ್ ಬೈಕ್’ನಲ್ಲಿ ಹೋಗುತ್ತಿದ್ದಾಗ ಬೈಕ್ ಅನ್ನು ತಡೆದ ಬಜರಂಗದಳ ಕಾರ್ಯಕರ್ತರು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಸಂತ್ರಸ್ತರು ದೂರು ನೀಡಿಲ್ಲ.

Join Whatsapp