Home ಟಾಪ್ ಸುದ್ದಿಗಳು ಮಂಗಳೂರು: ಬೇಕರಿ ಅಂಗಡಿ ಮಾಲೀಕ ಆತ್ಮಹತ್ಯೆ

ಮಂಗಳೂರು: ಬೇಕರಿ ಅಂಗಡಿ ಮಾಲೀಕ ಆತ್ಮಹತ್ಯೆ

ಉಳ್ಳಾಲ: ಎರಡು ಬೇಕರಿ ಅಂಗಡಿ ಮಾಲೀಕ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿದೆ.


ಹಾಸನ ಜಿಲ್ಲೆ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್ (36) ಆತ್ಮಹತ್ಯೆ ಮಾಡಿಕೊಂಡವರು.


ಮೃತರು ಮಕ್ಕಳಾದ 8ನೇ ತರಗತಿ ಕಲಿಯುವ ಪೂರ್ವಿಕಾ, 4ನೇ ತರಗತಿ ವಿದ್ಯಾರ್ಥಿ ನಿಶ್ಚಿತಾ ಹಾಗೂ ಪತ್ನಿ ಹೇಮಲತಾ ಜೊತೆಗೆ ಶಾಂತಿಬಾಗ್ ಬಳಿಯ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಈ ಹಿಂದೆ ಸಂತೋಷನಗರ ಎಂಬಲ್ಲಿದ್ದವರು ಕೆಲ ದಿನಗಳ ಹಿಂದಷ್ಟೇ ಇಲ್ಲಿನ ಬಾಡಿಗೆ ಮನೆಗೆ ಬಂದಿದ್ದರು. ರುದ್ರೇಶ್ ಕುತ್ತಾರು ಹಾಗೂ ಯೆನೆಪೋಯ ಆಸ್ಪತ್ರೆ ಬಳಿ ಬೆಂಗಳೂರ್ ಅಯ್ಯಂಗಾರ್ ಬೇಕರಿಯನ್ನು ನಡೆಸುತ್ತಾ ಬಂದಿದ್ದರು. ಪತಿ ರುದ್ರೇಶ್ ಒಂದು ಕೋಣೆಯಲ್ಲಿ ಮಲಗಿದ್ದರೆ, ಪತ್ನಿ ಹೇಮಲತಾ ಇನ್ನೊಂದು ಕೋಣೆಯಲ್ಲಿ ಮಲಗಿದ್ದರು. ಸಂಜೆ ಪತ್ನಿ ಹೇಮಲತಾ ನಿದ್ರೆಯಿಂದ ಎದ್ದಾಗ ಪತಿ ಏಳದೇ ಇರುವುದನ್ನು ಗಮನಿಸಿ ಬಾಗಿಲು ಮುರಿದು ನೋಡಿದಾಗ ರುದ್ರೇಶ್ ಕೋಣೆಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version