Home ಟಾಪ್ ಸುದ್ದಿಗಳು ಪರೀಕ್ಷೆಯಲ್ಲಿ ನಕಲು: ಮಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ನಕಲು: ಮಂಗಳೂರು ಮೂಲದ ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು: ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದು ಬಳಿಕ ಕಾಲೇಜಿನ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಿರಿನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಗಿರಿನಗರ ನಿವಾಸಿ ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.


ಆದಿತ್ಯ ಪ್ರಭು ಹೊಸಕೆರೆ ಹಳ್ಳಿ ಸಮೀಪದ ಪ್ರತಿಷ್ಠಿತ ಕಾಲೇಜಿನಲ್ಲಿ ಬಿಟೆಕ್ ನ ದ್ವಿತೀಯ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದ. ಇನ್ನು ಸೋಮವಾರ ಪರೀಕ್ಷೆಯಿದ್ದು, ಈ ವೇಳೆ ಮೊಬೈಲ್ ಮೂಲಕ ನಕಲು ಮಾಡುತ್ತಿದ್ದ. ಅದನ್ನು ಗಮನಿಸಿದ ಶಿಕ್ಷಕರು ತಕ್ಷಣ ಆತನ ಪೋಷಕರಿಗೆ ಕಾಲೇಜಿಗೆ ಬರುವಂತೆ ತಿಳಿಸಿದ್ದಾರೆ. ಅದರಿಂದ ಬೇಸರಗೊಂಡು 9ನೇ ಮಹಡಿಗೆ ಹೋಗಿ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version