Home ಕರಾವಳಿ ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯ ಆತ್ಮಹತ್ಯೆ

ಮಂಗಳೂರು: ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯ ಆತ್ಮಹತ್ಯೆ

ಮಂಗಳೂರು: ಬಿಜೆಪಿ ಬೆಂಬಲಿತ ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಸಂದೀಪ್ ಶೆಟ್ಟಿ ಮೊಗರು (35) ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತ್ ಸದಸ್ಯ ಎಂದು ಗುರುತಿಸಲಾಗಿದೆ.


ಗಂಜಿಮಠ ಗ್ರಾಮ ಪಂಚಾಯತ್’ನ ಮೊಗರು 9 ಮತ್ತು 10ನೇ ವಾರ್ಡ್’ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂದು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಸೇವಾ ಸಿಂದು ಕೇಂದ್ರ ನಡೆಸುತ್ತಿದ್ದ ಸಂದೀಪ್ ಶೆಟ್ಟಿ ಅವಿವಾಹಿತರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ವ್ಯಾವಹಾರಿಕ ಸಮಸ್ಯೆಗಳು ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ.

Join Whatsapp
Exit mobile version