ಮಂಗಳೂರು: ಮೊಟ್ಟೆ ಸಾಗಾಟ ವಾಹನಕ್ಕೆ ಬಸ್ ಡಿಕ್ಕಿ

Prasthutha|

ಮಂಗಳೂರು: ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೆಲೆನ್ಸಿಯಾದಲ್ಲಿ ನಡೆದಿದೆ.

- Advertisement -


ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಬಸ್ ಗಳು ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಬಸ್ ಓವರ್ ಟೇಕ್ ಮಾಡಲು ಮುಂದಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೊಟ್ಟೆ ವಾಹನಕ್ಕೆ ಡಿಕ್ಕಿ ಹೊಡೆದಿದೆ.


ಬಸ್, ಮೊಟ್ಟೆ ಸಾಗಾಟದ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೊಟ್ಟೆಗಳೆಲ್ಲ ಒಡೆದು ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದಿವೆ.

Join Whatsapp