ಮಂಗಳೂರು: ಬಸ್ ಚಾಲಕರು, ಕಂಡಕ್ಟರ್ ಗಳಿಗೆ ಪ್ರಯಾಣಿಕರ ಸುರಕ್ಷತೆ ಕುರಿತು ಜಾಗೃತಿ

Prasthutha|

ಮಂಗಳೂರು: ದಕ್ಷಿಣ ಕನ್ನಡ ಬಸ್ ನಿರ್ವಾಹಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ನೇತೃತ್ವದಲ್ಲಿ ನಂತೂರಿನಲ್ಲಿ ಶನಿವಾರ ಬಸ್ ಚಾಲಕರು ಮತ್ತು ಕಂಡಕ್ಟರ್ ಗಳಿಗೆ ಪ್ರಯಾಣಿಕರ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಯಿತು.

- Advertisement -


ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ಮೃತಪಟ್ಟ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ಇಂದು ಬೆಳಗ್ಗೆ ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಿದರು.


ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ಸು ನಿರ್ವಾಕರಿಗೆ ನೀಡಿ ಮನವರಿಕೆ ಮಾಡಲಾಯಿತು.

- Advertisement -


ನಿರ್ವಾಹಕ ಸಹಿತ ಯಾರೂ ಬಸ್ಸಿನ ಫೂಟ್ಬೋರ್ಡ್ ನಲ್ಲಿ ನಿಲ್ಲುವಂತಿಲ್ಲ, ಪ್ರತಿಯೊಬ್ಬರಿಗೂ ಟಿಕೆಟ್ ನೀಡಬೇಕು, ಚಲೋ ಕಾರ್ಡ್ ಗಳನ್ನು ತಿರಸ್ಕರಿಸುವಂತಿಲ್ಲ, ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕರ್ಕಶ ಹಾರ್ನ್ ಬಳಸುವಂತಿಲ್ಲ ಮೊದಲಾದ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಕರಿಗೆ ನೀಡಲಾಯಿತು.