Home ಟಾಪ್ ಸುದ್ದಿಗಳು ಮಂಗಳೂರು: ಬಸ್ ಚಾಲಕರು, ಕಂಡಕ್ಟರ್ ಗಳಿಗೆ ಪ್ರಯಾಣಿಕರ ಸುರಕ್ಷತೆ ಕುರಿತು ಜಾಗೃತಿ

ಮಂಗಳೂರು: ಬಸ್ ಚಾಲಕರು, ಕಂಡಕ್ಟರ್ ಗಳಿಗೆ ಪ್ರಯಾಣಿಕರ ಸುರಕ್ಷತೆ ಕುರಿತು ಜಾಗೃತಿ

ಮಂಗಳೂರು: ದಕ್ಷಿಣ ಕನ್ನಡ ಬಸ್ ನಿರ್ವಾಹಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪಾಡಿ ನೇತೃತ್ವದಲ್ಲಿ ನಂತೂರಿನಲ್ಲಿ ಶನಿವಾರ ಬಸ್ ಚಾಲಕರು ಮತ್ತು ಕಂಡಕ್ಟರ್ ಗಳಿಗೆ ಪ್ರಯಾಣಿಕರ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಯಿತು.


ಖಾಸಗಿ ಬಸ್ಸಿನಿಂದ ಹೊರಗೆಸೆಯಲ್ಪಟ್ಟು ಕಂಡಕ್ಟರ್ ಮೃತಪಟ್ಟ ಮತ್ತು ಇತರ ಖಾಸಗಿ ಬಸ್ ವಿಚಾರವಾಗಿ ಇಂದು ಬೆಳಗ್ಗೆ ನಗರದ ನಂತೂರ್ ವೃತ್ತದ ಬಳಿ ಬಸ್ಸು ಮಾಲಕರು ಬಸ್ ಚಾಲಕ ಮತ್ತು ನಿರ್ವಾಹಕರಿಗೆ ಜಾಗೃತಿ ಮೂಡಿಸಿದರು.


ಈ ಕುರಿತಂತೆ ಮಾಹಿತಿ ಇರುವ ಪ್ರತಿಗಳನ್ನು ಬಸ್ಸು ನಿರ್ವಾಕರಿಗೆ ನೀಡಿ ಮನವರಿಕೆ ಮಾಡಲಾಯಿತು.


ನಿರ್ವಾಹಕ ಸಹಿತ ಯಾರೂ ಬಸ್ಸಿನ ಫೂಟ್ಬೋರ್ಡ್ ನಲ್ಲಿ ನಿಲ್ಲುವಂತಿಲ್ಲ, ಪ್ರತಿಯೊಬ್ಬರಿಗೂ ಟಿಕೆಟ್ ನೀಡಬೇಕು, ಚಲೋ ಕಾರ್ಡ್ ಗಳನ್ನು ತಿರಸ್ಕರಿಸುವಂತಿಲ್ಲ, ಪ್ರಯಾಣಿಕರೊಂದಿಗೆ ಸೌಜನ್ಯದಿಂದ ವರ್ತಿಸಬೇಕು, ಕರ್ಕಶ ಹಾರ್ನ್ ಬಳಸುವಂತಿಲ್ಲ ಮೊದಲಾದ ಸೂಚನೆಗಳನ್ನು ಬಸ್ಸು ಚಾಲಕ ಮತ್ತು ನಿರ್ವಾಕರಿಗೆ ನೀಡಲಾಯಿತು.

Join Whatsapp
Exit mobile version