Home ಟಾಪ್ ಸುದ್ದಿಗಳು ಮಂಗಳೂರು: ಬಸ್ ಮಾಲಕ ಆತ್ಮಹತ್ಯೆ

ಮಂಗಳೂರು: ಬಸ್ ಮಾಲಕ ಆತ್ಮಹತ್ಯೆ

ಮಂಗಳೂರು: ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.


ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ಮೃತರು.


ಇವರು ಭವಾನಿ ಬಸ್ ನ ಮಾಲಕರಾಗಿದ್ದ ದೇವೇಂದ್ರ ಅವರ ಎರಡನೇ ಪುತ್ರ. ಮಂಗಳವಾರ ಬೆಳಗ್ಗೆ ಜೆ.ಎಂ. ರೋಡ್ ನಲ್ಲಿರುವ ಸ್ವಗೃಹದಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಸಹೋದರ ಬಸ್ ನ ಮಾಲಕ ರಾಗಿದ್ದರು. ಪ್ರಜ್ವಲ್ ಅದೇ ವ್ಯವಹಾರ ನೋಡಿಕೊಳ್ಳುತ್ತಿದ್ದರು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

Join Whatsapp
Exit mobile version