ಮಂಗಳೂರು: ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ದೃಢೀಕರಿಸಲು ಸ್ವಯಂ ಪ್ರೇರಿತ ಆಧಾರದ ಮೇಲೆ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಜೋಡಣೆ ಮಾಡಲು ಸೆ.18ರಂದು ಬೆಳಿಗ್ಗೆ 10 ರಿಂದ ಸಂಜೆ 5ಗಂಟೆಯ ವರೆಗೆ ಎಲ್ಲಾ ಮತಗಟ್ಟೆಗಳಲ್ಲಿ ಎರಡು ದಿನದ ವಿಶೇಷ ಆಂದೋಲನ ಹಮ್ಮಿಕೊಳ್ಳಲಾಗಿದೆ.
ಎಲ್ಲಾ ಬೂತ್ ಮಟ್ಟದ ಅಧಿಕಾರಿಗಳು ಅಂದು ಮತಗಟ್ಟೆಯಲ್ಲಿ ಹಾಜರಿದ್ದು ಸಾರ್ವಜನಿಕರ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಸ್ಥಳದಲ್ಲೇ ಜೋಡಣೆ ಮಾಡುವುದರೊಂದಿಗೆ ಆಧಾರ್ ಕಾರ್ಡ್ ಹೊಂದಿರದವರ ನರೇಗಾ ಜಾಬ್ ಕಾರ್ಡ್, ಛಾಯಾಚಿತ್ರವಿರುವ ಬ್ಯಾಂಕ್, ಅಂಚೆ ಕಚೇರಿ ಪಾಸ್ ಪುಸ್ತಕ, ಕಾರ್ಮಿಕ ಸಚಿವಾಲಯದ ಯೋಜನೆಯಡಿ ನೀಡಲಾದ ಆರೋಗ್ಯ ವಿಮೆ, ಸ್ಮಾರ್ಟ್ ಕಾರ್ಡ್ ಅಥವಾ ಚಾಲನಾ ಪರವಾನಗಿ, ಪಾನ್ ಕಾರ್ಡ್, ಎನ್.ಪಿ.ಆರ್. ಅಡಿಯಲ್ಲಿ ಆರ್.ಜಿ.ಐ ನೀಡಿದ ಸ್ಮಾರ್ಟ್ ಕಾರ್ಡ್, ಪಾಸ್ ಪೋರ್ಟ್, ಛಾಯಾಚಿತ್ರವಿರುವ ಪಿಂಚಣಿ ದಾಖಲೆ, ಕೇಂದ್ರ, ರಾಜ್ಯದಿಂದ ಉದ್ಯೋಗಿಗೆ ನೀಡಿರುವ ಛಾಯಾಚಿತ್ರವಿರುವ ಸೇವಾ ಗುರುತಿನ ಚೀಟಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ನೀಡಲಾದ ವಿಶಿಷ್ಟ ಗುರುತಿನ ಕಾರ್ಡ್ ಇವುಗಳಲ್ಲಿ ಯಾವುದಾದರೊಂದು ದಾಖಲೆ ಪಡೆದು ಮತದಾರರ ಚೀಟಿಗೆ ಜೋಡಣೆ ಮಾಡುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.