ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Prasthutha|

ಮಂಗಳೂರು: ಮಂಗಳೂರು ಸಿಸಿಬಿ ಪೊಲೀಸರು ಡ್ರಗ್​ ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಎಮ್​ಡಿಎಮ್​ಎ ಡ್ರಗ್​ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

- Advertisement -

ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು (33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ ಅಲಿಯಾಸ್ ನಿಚ್ಚು ಬಂಧಿತ ಆರೋಪಿಗಳು. ಆರೋಪಿಗಳ ಬಳಿ ಇದ್ದ 2.6 ಲಕ್ಷ ರೂ. ಮೌಲ್ಯದ ಎಮ್​ಡಿಎಮ್​ಎ ಡ್ರಗ್​ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಮಂಗಳೂರಿನ ವಿವಿಧ ಪ್ರದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು. ಹೀಗೆ ಸುರತ್ಕಲ್​​​ನ ತಡಂಬೈಲ್ ಬೀಚ್ ಬಳಿ ಕಾರಿನಲ್ಲಿ ನಿಷೇಧಿತ ಎಮ್​ಡಿಎಮ್​ಎ ಮಾರುವಾಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

26 ದಿನಗಳಲ್ಲಿ 40 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

ಇನ್ನು ಮಂಗಳೂರು ಪೊಲೀಸರು ಕಳೆದ 26 ದಿನಗಳಲ್ಲಿ 40 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ನಿಷೇಧಿತ ಎಮ್​ಡಿಎಮ್​ಎ ಡ್ರಗ್ ಪಾಲು ಹೆಚ್ಚಾಗಿತ್ತು. ಹಾಗೇ ಪೊಲೀಸರು ಹತ್ತು ಪ್ರಕರಣದಲ್ಲಿ ಒಟ್ಟು 22 ಜನರನ್ನು ಬಂಧಿಸಿದ್ದರು.

ಈ ಆರೋಪಿಗಳು ಬೆಂಗಳೂರಿನಿಂದ ಎಮ್​ಡಿಎಮ್​ಎ ಡ್ರಗ್ ಖರೀದಿಸಿ ತಂದು ಕರಾವಳಿ, ಕೇರಳ ಭಾಗದಲ್ಲಿ ಮಾರಾಟ ಮಾಡುತ್ತಿದ್ದರು. ಸದ್ಯ ನಗರ ಪೊಲೀಸರು ಈ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾದ ಇನ್ನು ಹಲವರಿಗಾಗಿ ಶೋಧ ನಡೆಸುತ್ತಿದ್ದಾರೆ.

Join Whatsapp