Home ಕರಾವಳಿ ಮಂಗಳೂರು: ಕಾನೂನು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ: ರಾಜೇಶ್ ಭಟ್ ವಿರುದ್ಧ ಚಾರ್ಜ್ ಶೀಟ್...

ಮಂಗಳೂರು: ಕಾನೂನು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ: ರಾಜೇಶ್ ಭಟ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಮಂಗಳೂರು: ಕಾನೂನು ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಕೆ.ಎಸ್.ಎನ್. ರಾಜೇಶ್ ಭಟ್ ವಿರುದ್ಧ ಮಂಗಳೂರಿನ ಜೆಎಂಎಫ್ಸಿ 3ನೇ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.

2021ರ ಸೆ.25ರಂದು ರಾಜೇಶ್ ಭಟ್ ತನ್ನ ಮಂಗಳೂರಿನ  ಕಚೇರಿಯಲ್ಲಿ ಇಂಟರ್ನ್ ಶಿಪ್ ಗೆ  ಬಂದಿದ್ದ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಅತ್ಯಾಚಾರಕ್ಕೆ ಯತ್ನಿಸಿದಾಗ ಆಕೆ ತಪ್ಪಿಸಿಕೊಂಡು ಹೋಗಿದ್ದಳು. ಈ ಸಂದರ್ಭ ರಾಜೇಶ್ ಭಟ್ ಆಕೆಗೆ ಜೀವ ಬೆದರಿಕೆ ಹಾಕಿದ್ದ ಎಂಬುದನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ.

ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರಿಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Join Whatsapp
Exit mobile version